SDA FDA ಹಳೆಯ ಪ್ರಶ್ನೆ ಪತ್ರಿಕೆಗಳು
30 OLD Question Paper with Answer
ಸ್ಪರ್ಧಾತ್ಮಕ ಪರೀಕ್ಷೆ -2006 ರಿಂದ ಈಚೆಗೆ ನಡೆದ ಪ್ರಶ್ನೇಪತ್ರಿಕೆಗಳ ಜೊತೆ ಉತ್ತರಗಳು ಸಹ ಇವೆ…..
ಒಟ್ಟಾರೆ 2 ಪ್ರಶ್ನೇಪತ್ರಿಕೆಗಳು ಇರುತ್ತವೆ
ಪತ್ರಿಕೆ 1: ( ಸಾಮಾನ್ಯ ಜ್ಞಾನ)
ಪತ್ರಿಕೆ 2: (ಕನ್ನಡ, ಇಂಗ್ಲೀಷ್ ಮತ್ತು ಕಂಪ್ಯೂಟರ್)
ಒಟ್ಟು ಪ್ರಶ್ನೆಗಳ ಸಂಖ್ಯೆ : 100
ಅವಧಿ : ಎರಡು ಘಂಟೆಗಳು
<>:<>:<>:<>:<>:<>:<>:<>:<>:<>:<>:<>:<>:<>:<>:<>:<>:<>:<>:<>:<>:<>:<>:<>:<>:<>:<>
ಮಾಡಿ
1. ಕೊಠಡಿ ಮೇಲ್ವಿಚಾರಕರು ಈ ಪ್ರಶ್ನೆಪತ್ರಿಕೆಯನ್ನು ನಿಮಗೆ ಎರಡನೇ ಬೆಲ್ ಆದ ನಂತರ ಕೊಡುತ್ತಾರೆ.
2. ನೊಂದಣಿ ಸಂಖ್ಯೆಯನ್ನು ಓ.ಎಂ.ಆರ್. ಉತ್ತರ ಪತ್ರಿಕೆಯಲ್ಲಿ ಬರೆದು ಅದಕ್ಕೆ ಸಂಬಂಧಿಸಿದ ವೃತ್ತಗಳನ್ನು ಸಂಪೂರ್ಣವಾಗಿ ತುಂಬಿದ್ದೀರೆಂದು ಖಾತ್ರಿ ಪಡಿಸಿಕೊಳ್ಳತಕ್ಕದ್ದು,
3. ಪ್ರಶ್ನೆಪತ್ರಿಕೆಯ ವರ್ಷನ್ ಕೋಡ್ ಅನ್ನು ಓ.ಎಂ.ಆರ್. ಉತ್ತರ ಪತ್ರಿಕೆಯಲ್ಲಿ ಬರೆದು ಅದಕ್ಕೆ ಸಂಬಂಧಿಸಿದ ವೃತ್ತಗಳನ್ನು ಸಂಪೂರ್ಣವಾಗಿ ತುಂಬಬೇಕು.
4. ಪ್ರಶ್ನೆ ಪತ್ರಿಕೆಯ ವರ್ಷನ್ ಕೋಡ್ ಮತ್ತು ಕ್ರಮ ಸಂಖ್ಯೆಯನ್ನು ನಾಮಿನಲ್ ರೋಲ್‌ನಲ್ಲಿ ತಪ್ಪಿಲ್ಲದೆ ಬರೆಯಬೇಕು.
5. ಓ.ಎಂ.ಆರ್. ಉತ್ತರ ಪತ್ರಿಕೆಯ ಕೆಳಭಾಗದ ನಿಗದಿತ ಜಾಗದಲ್ಲಿ ಪೂರ್ಣ ಸಹಿ ಮಾಡಬೇಕು.
ಮಾಡಬೇಡಿ
1. ಓ.ಎಂ.ಆರ್. ಉತ್ತರ ಪತ್ರಿಕೆಯಲ್ಲಿ ಮುದ್ರಿತವಾಗಿರುವ ಟೈಮಿಂಗ್ & ಮಾರ್ಕನ್ನು ತಿದ್ದಬಾರದು / ಹಾಳುಮಾಡಬಾರದು / ಅಳಿಸಬಾರದು. 2. ಮೂರನೇ ಬೆಲ್ ಆಗುವವರೆಗೂ,
ಪ್ರಶ್ನೆ ಪತ್ರಿಕೆಯ ಬಲಭಾಗದಲ್ಲಿರುವ ಸೀಲ್ ಅನ್ನು ತೆಗೆಯಬಾರದು.
ಪ್ರಶ್ನೆ ಪತ್ರಿಕೆಯ ಒಳಗಡೆ ಇರುವ ಪ್ರಶ್ನೆಗಳನ್ನು ನೋಡಲು ಪ್ರಯತ್ನಿಸಬಾರದು ಅಥವಾ ಓ.ಎಂ.ಆರ್. ಉತ್ತರ ಪತ್ರಿಕೆಯಲ್ಲಿ ಉತ್ತರಿಸಲು ಪ್ರಾರಂಭಿಸಬಾರದು.
ಅಭ್ಯರ್ಥಿಗಳಿಗೆ ಮುಖ್ಯ ಸೂಚನೆಗಳು
1. ಪ್ರಶ್ನೆಗಳಲ್ಲಿ ಬಳಸಿರುವ signs and symbols ಗಳನ್ನು, ಬೇರೆ ರೀತಿಯಲ್ಲಿ ಹೇಳದ ಹೊರತು, ನಿಗದಿತ ಪಠ್ಯಪುಸ್ತಕದಲ್ಲಿನ ಅರ್ಥವನ್ನು ಪರಿಗಣಿಸಬೇಕು.
2. ಪ್ರಶ್ನೆ ಪತ್ರಿಕೆಯಲ್ಲಿ ಒಟ್ಟು 100 ಪ್ರಶ್ನೆಗಳಿದ್ದು, ಪ್ರತಿ ಪ್ರಶ್ನೆಗೂ 4 ಬಹು ಆಯ್ಕೆ ಉತ್ತರಗಳು ಇರುತ್ತವೆ. ಪ್ರತಿ ಪ್ರಶ್ನೆಯ ಕೆಳಗೆ ಕೊಟ್ಟಿರುವ ನಾಲ್ಕು ಬಹು ಆಯ್ಕೆಯ
ಉತ್ತರಗಳಲ್ಲಿ ಸರಿಯಾದ ಒಂದು ಉತ್ತರವನ್ನು ಆಯ್ಕೆ ಮಾಡಿ.
3. ಮೂರನೇ ಬೆಲ್ ನಂತರ ಪ್ರಶ್ನೆ ಪತ್ರಿಕೆಯ ಬಲಭಾಗದಲ್ಲಿರುವ ಸೀಲ್ ತೆಗೆದು ಈ ಪ್ರಶ್ನೆ ಪತ್ರಿಕೆಯಲ್ಲಿ ಯಾವುದೇ ಪುಟಗಳು ಮುದ್ರಿತವಾಗಿಲ್ಲದೇ ಇರುವುದು ಕಂಡು ಬಂದಲ್ಲಿ ಅಥವಾ ಹರಿದು ಹೋಗಿದ್ದಲ್ಲಿ ಅಥವಾ ಯಾವುದೇ ಅಕ್ಷರಗಳು ಬಿಟ್ಟುಹೋಗಿದ್ದಲ್ಲಿ ಎಂಬುದನ್ನು ಖಚಿತಪಡಿಸಿಕೊಂಡು,
ಈ ರೀತಿ ಆಗಿದ್ದರೆ ಕೂಡಲೇ ಪ್ರಶ್ನೆಪತ್ರಿಕೆಯನ್ನು ಬದಲಾಯಿಸಿಕೊಳ್ಳುವುದು ನಂತರ ಓ.ಎಂ.ಆರ್. ಉತ್ತರ ಪತ್ರಿಕೆಯಲ್ಲಿ ಉತ್ತರಿಸಲು ಪ್ರಾರಂಭಿಸುವುದು.
4. ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗೆ ಅನುಗುಣವಾಗಿರುವ ಸರಿ ಉತ್ತರವನ್ನು ಓ.ಎಂ.ಆರ್. ಉತ್ತರ ಪತ್ರಿಕೆಯಲ್ಲಿ ಅದೇ ಕ್ರಮ ಸಂಖ್ಯೆಯ ಮುಂದೆ ನೀಡಿರುವ ಸಂಬಂಧಿಸಿದ ವೃತ್ತವನ್ನು ನೀಲಿ ಅಥವಾ ಕಪ್ಪು ಶಾಯಿಯ ಬಾಲ್ ಪಾಯಿಂಟ್ ಪೆನ್ ನಿಂದ ಸಂಪೂರ್ಣ ತುಂಬುವುದು.
5. ಈ ಓ.ಎಂ.ಆರ್. ಉತ್ತರ ಪತ್ರಿಕೆಯನ್ನು ಸ್ಕ್ಯಾನ್ ಮಾಡುವ ಸ್ಕ್ಯಾನರ್ ಬಹಳ ಸೂಕ್ಷ್ಮವಾಗಿದ್ದು ಸಣ್ಣ ಗುರುತನ್ನು ಸಹ ದಾಖಲಿಸುತ್ತದೆ. ಆದ್ದರಿಂದ ಓ.ಎಂ.ಆರ್. ಉತ್ತರ ಪತ್ರಿಕೆಯಲ್ಲಿ ಉತ್ತರಿಸುವಾಗ ಎಚ್ಚರಿಕೆ ವಹಿಸಿ.
6. ಪ್ರಶ್ನೆ ಪತ್ರಿಕೆಯಲ್ಲಿ ಕೊಟ್ಟಿರುವ ಖಾಲಿ ಲಿ ಜಾಗವನ್ನು ರಫ್ ಕೆಲಸಕ್ಕೆ ಉಪಯೋಗಿಸಿ, ಓ.ಎಂ.ಆರ್. ಉತ್ತರ ಪತ್ರಿಕೆಯನ್ನು ಇದಕ್ಕೆ ಉಪಯೋಗಿಸಬೇಡಿ. 7 . ಕೊನೆಯ ಬೆಲ್ ಆದ ನಂತರ ಉತ್ತರಿಸುವುದನ್ನು ನಿಲ್ಲಿಸಿ, ಓ.ಎಂ.ಆರ್. ಉತ್ತರ ಪತ್ರಿಕೆಯನ್ನು ಕೊಠಡಿ ಮೇಲ್ವಿಚಾರಕರಿಗೆ ಯಥಾಸ್ಥಿತಿಯಲ್ಲಿ ನೀಡಿರಿ.
8. ಕೊಠಡಿ ಮೇಲ್ವಿಚಾರಕರು ಮೇಲ್ಬಾಗದ ಹಾಳೆಯನ್ನು ಪ್ರತ್ಯೇಕಿಸಿ(ಕಚೇರಿ ಪ್ರತಿ) ತನ್ನ ವಶದಲ್ಲಿ ಇಟ್ಟುಕೊಂಡು ತಳಬದಿಯ ಯಥಾಪ್ರತಿಯನ್ನು(ಅಭ್ಯರ್ಥಿ ಪ್ರತಿ) ಅಭ್ಯರ್ಥಿಗಳಿಗೆ ಕೊಡುತ್ತಾರೆ.
9. ಎಲ್ಲಾ ಪ್ರಶ್ನೆಗಳಿಗೆ ಸಮಾನ ಅಂಕಗಳಿರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ ನಿಗದಿಪಡಿಸಿದ ಅಂಕಗಳ 1/4 (0.25) ರಷ್ಟು ಅಂಕಗಳನ್ನು ಕಳೆಯಲಾಗುವುದು.
10. ಯಾವುದೇ ರೀತಿಯ ಮೊಬೈಲ್ ಫೋನ್, ಕ್ಯಾಲ್‌ಕ್ಯುಲೇಟರ್ ಮತ್ತು ಇತರೆ ರೀತಿಯ ಎಲೆಕ್ಟ್ರಾನಿಕ್/ಕಮ್ಯುನಿಕೇಷನ್ ಸಾಧನಗಳು ಇತ್ಯಾದಿಗಳನ್ನು ಪರೀಕ್ಷಾ ಕೇಂದ್ರದ ಆವರಣದೊಳಗೆ ತರುವುದನ್ನು ನಿಷೇಧಿಸಿದೆ.
ಸೂಚನೆ :
ಕನ್ನಡ ಆವೃತ್ತಿಯ ಪ್ರಶ್ನೆಗಳಲ್ಲಿ ಉತ್ತರಿಸುವ ಅಭ್ಯರ್ಥಿಗಳಿಗೆ ಕನ್ನಡದಲ್ಲಿ ಮುದ್ರಿತವಾಗಿರುವ ಪ್ರಶ್ನೆಗಳ ಬಗ್ಗೆ ಏನಾದರೂ ಸಂದೇಹವಿದ್ದಲ್ಲಿ ಇಂಗ್ಲೀಷ್ ಆವೃತ್ತಿಯ ಪ್ರಶ್ನೆಪತ್ರಿಕೆಯನ್ನು ನೋಡಬಹುದು. ಏನಾದರೂ ವ್ಯತ್ಯಾಸ ಕಂಡುಬಂದಲ್ಲಿ ಇಂಗ್ಲೀಷ್ ಆವೃತ್ತಿಯನ್ನು ಅಂತಿಮ ಎಂದು ಪರಿಗಣಿಸಲಾಗುವುದು.
<><>::<><>::<><>::<><>::<><>::<><>::<><>::<><>::<><>::<><>::<><>::<><>::<><>::<><>